nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026
    Facebook Twitter Instagram
    ಟ್ರೆಂಡಿಂಗ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    • ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!
    • ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
    • ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಳ್ಳಿಕಾರ್ ಸಮುದಾಯದ ಬೇಡಿಕೆ; ಸಿಎಂ ಜೊತೆಗೆ ಚರ್ಚೆ ಎಂದ ಸಚಿವ ತಂಗಡಗಿ
    ರಾಜ್ಯ ಸುದ್ದಿ July 10, 2023

    ಹಳ್ಳಿಕಾರ್ ಸಮುದಾಯದ ಬೇಡಿಕೆ; ಸಿಎಂ ಜೊತೆಗೆ ಚರ್ಚೆ ಎಂದ ಸಚಿವ ತಂಗಡಗಿ

    By adminJuly 10, 2023No Comments2 Mins Read
    bengaluru

    ಒಕ್ಕಲಿಗ ಸಮುದಾಯದ ಉಪ ಪಂಗಡವಾಗಿರುವ ಹಳ್ಳಿಕಾರ್ ಒಕ್ಕಲಿಗರು ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯದ ಬೇಡಿಕೆಯಾಗಿರುವ ಹಿಂದುಳಿದ ವರ್ಗದ 3-ಎ ಪ್ರವರ್ಗದಿಂದ ಅತಿ ಹಿಂದುಳಿದ ವರ್ಗದ ಪ್ರವರ್ಗ -1 ಅಡಿ ಸೇರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ.

    ಆರ್. ಎಂ. ಆರ್. ಫೌಂಡೇಷನ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಜಯನಗರದಲ್ಲಿ ಭಾನುವಾರ ಆಯೋಜಿಸಿದ್ದ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಸಣ್ಣ ಸಣ್ಣ ಸಮುದಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಕಾಳಜಿ ಹೊಂದಿದ್ದು, ಆ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸುತ್ತಿದ್ದಾರೆ. ಹಳ್ಳಿಕಾರ್ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಡಿ ಸೇರಿಸಬೇಕೆಂಬ ಸಮುದಾಯದ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ರಂಗದಲ್ಲಿ ತುಂಬಾ
    ಹಿಂದುಳಿದಿರುವ ಸಮಾಜ ಮುಂದೆ ಬರಲು ಸೂಕ್ತ ಮೀಸಲಾತಿ ಅಗತ್ಯ.

    ಈಗಾಗಲೇ ಸಮುದಾಯಕ್ಕೆ ಸೇರಿದ ಕಡತ ಸರ್ಕಾರದ ಮಟ್ಟದಲ್ಲಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹಳ್ಳಿಕಾರ್ ಸಮುದಾಯದ ಪ್ರವರ್ಗ ಬದಲಿಸುವುದರಿಂದ ಈ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಲಿದೆ ಎಂಬುದು ಸಮುದಾಯದ ಜನರ ಅಭಿಪ್ರಾಯ. ಸಮುದಾಯದ ಬೆಳವಣಿಗೆಗೆ ಸರ್ಕಾರ ಬದ್ಧವಾಗಿದ್ದು ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು.

    ರಾಜಕೀಯ ಪ್ರಾತಿನಿಧ್ಯ ಇಲ್ಲದಂತಹ ಸಣ್ಣ ಸಮಾಜಕ್ಕೆ ಕಳೆದ ಬಜೆಟ್‌ ನಲ್ಲಿ ಅನುದಾನ ಮೀಸಲಿಟ್ಟ ಕೀರ್ತಿ ಸಿದ್ದರಾಮಯ್ಯ ಅವರಿಗೆ ಇದೆ. ದೇವರಾಜ ಅರಸು ಅವರ ಆಡಳಿತದ ಬಗ್ಗೆ ತಿಳಿದಿದ್ದೇವೆ. ಅದೇ ರೀತಿಯಲ್ಲಿ ಹೆಜ್ಜೆ ಹಾಕಿರುವವರು ಸಿದ್ದರಾಮಯ್ಯ ಎಂದು ಶ್ಲಾಘಿಸಿದರು. ಹಳ್ಳಿಕಾರ್ ಸಮಾಜ ಸಣ್ಣದಿದ್ದರೂ ದೊಡ್ಡ ಕಾರ್ಯಕ್ರಮವನ್ನು ಮಾಡುತ್ತಿರುವುದು ಸಂತಸದ ವಿಚಾರ. ಇಂತಹ ಕಾರ್ಯಕ್ರಮ ಮಾಡುವುದರಿಂದ ಸಮಾಜಕ್ಕೆ ಶಕ್ತಿ ಬರಲಿದೆ. ಒಗ್ಗಟ್ಟು ಇದ್ದಲ್ಲಿ ಮಾತ್ರ ಆ ಸಮುದಾಯಗಳು ಬೆಳೆಯಲು ಸಾಧ್ಯ ಎಂದು ಕಿವಿ ಮಾತು ಹೇಳಿದರು.

    ಹಳ್ಳಿಕಾರ್ ತಳಿಯ ಜಾನುವಾರುಗಳನ್ನು ಸಮಾಜಕ್ಕೆ ಕೊಟ್ಟ ಕೀರ್ತಿ ಹಳ್ಳಿಕಾರ್ ಸಮಾಜದ್ದು. ಮುಂದಿನ ದಿನಗಳಲ್ಲಿ ಈ ಸಮುದಾಯದ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಪಡೆಯಲಿ, ರಾಜಕೀಯವಾಗಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

    ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಎಚ್. ಎಂ. ರೇವಣ್ಣ, ವಿಧಾನಪರಿಷತ್ ಸದಸ್ಯ ಯು. ಬಿ. ವೆಂಕಟೇಶ್, ಮಾಜಿ ಶಾಸಕ ಕೆ. ಚಂದ್ರಶೇಖರ್, ಮಾಜಿ ಪರಿಷತ್ ಸದಸ್ಯ ಪಿ. ಆರ್. ರಮೇಶ್, ಆರ್‌ಎಂಆ‌ ಫೌಂಡೇಶನ್ ಅಧ್ಯಕ್ಷ ಕೆ. ಎಂ. ನಾಗರಾಜ್ ಮತ್ತಿತರರು ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ತುಮಕೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ನೇರ ನೇಮಕಾತಿ, ಪದೋನ್ನತಿ, ಬ್ಯಾಕ್‌ ಲಾಗ್, ಕೆಪಿಎಸ್‌ ಸಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ…

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.