ಡಿಸಿಎಂ ಡಿ ಕೆ ಶಿವಕುಮಾರ್ ಅವರು ಯಶವಂತಪುರದ ಸೀಗೇಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಭಾನುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟಕ ಇನ್ನೂ ಕಾರ್ಯಾರಂಭ ಮಾಡದಿರುವುದನ್ನು ಗಮನಿಸಿದರು.
ಇದುವರೆಗೂ ಅಧಿಕಾರಿಗಳು ಪರಿಶೀಲನೆ ಮಾಡದ ದುರ್ವಾಸನೆಯಿಂದ ಕೂಡಿದ ಘಟಕಗಳಿಗೆ ಹೋಗಿ ಪರಿಶೀಲನೆ ನಡೆಸಿ ಅಲ್ಲಿನ ದಾಖಲೆ, ಕಾರ್ಯವೈಖರಿ ಪರಿಶೀಲಿಸಿದರು.
ನಂತರ ಕನ್ನಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ, ಇಂಧನ ಉತ್ಪಾದನೆ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಮೇಲ್ವಿಚಾರಕರಿಂದ ಮಾಹಿತಿ ಪಡೆದರು. ಪ್ರವೇಶದ್ವಾರದ ರಿಜಿಸ್ಟರ್ ಪುಸ್ತಕದಲ್ಲಿ ಆಗಿರುವ ದಾಖಲೆ ಮತ್ತು ಒಳಗೆ ಬಂದಿರುವ ಕಸ ಲಾರಿಗಳ ಸಂಖ್ಯೆಯಲ್ಲಿ ವ್ಯತ್ಯಾಸ ಗಮನಿಸಿದರು. ಇಂಧನ ಉತ್ಪಾದನೆ ಆಗದಿರುವುದನ್ನು ಗಮನಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


