ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ? ಎಂಬ ಚರ್ಚೆಗಳು ಆರಂಭವಾಗಿದೆ.
ಇತ್ತೀಚೆಗೆ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಬಹಳ ಸಾಫ್ಟ್ ಕಾರ್ನರ್ ಆಗಿ ಮಾತುಗಳನ್ನು ಆಡುತ್ತಿದ್ದು, ಲೋಕಸಭಾ ಚುನಾವಣೆಗೆ ನಮ್ಮ ಕುಟುಂಬದಿಂದ ಯಾರು ಸ್ಪರ್ಧೆ ಮಾಡುವುದಿಲ್ಲ ಎಂಬುದನ್ನು ಹೇಳುವ ಮೂಲಕ ಈ ವಿಚಾರಕ್ಕೆ ಪುಷ್ಟಿ ನೀಡುತ್ತಿದ್ದಾರೆ.
ಇನ್ನು ಕೇಂದ್ರ ಸಚಿವರಾಗುವ ಮೂಲಕ ರಾಜ್ಯದಲ್ಲಿ ತಮ್ಮ ಪಕ್ಷವನ್ನು ಸದೃಢಗೊಳಿಸಿಕೊಳ್ಳಬಹುದು. ತಮ್ಮ ಪುತ್ರನಿಗೂ ರಾಜಕೀಯ ನೆಲೆ ಕಲ್ಪಿಸಬಹುದು. ಜೊತೆಗೆ ಮುಂದಿನ 5 ವರ್ಷಗಳ ಕಾಲ ಆ್ಯಕ್ಟಿವ್ ರಾಜಕಾರಣದಲ್ಲಿ ಗುರುತಿಸಿಕೊಳ್ಳಬಹುದು ಎಂಬ ಕಾರಣವನ್ನು ಮುಂದಿಟ್ಟುಕೊಂಡು ಕೇಂದ್ರ ಸಚಿವರಾಗುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


