ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ, ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದ್ದು, ಶೀಘ್ರ ಜಾರಿಗೊಳಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ. ನಾಗೇಂದ್ರ ಅವರು ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಈ ವಿಷಯ ತಿಳಿಸಿದರು. ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರೀಡೆಗಳು ಹೆಸರುವಾಸಿ. ವಿಜಯನಗರದಲ್ಲಿ ಕುಸ್ತಿ, ವಿಜಯಪುರದಲ್ಲಿ ಸೈಕ್ಲಿಂಗ್ ನಂತೆ ಎಲ್ಲ ಜಿಲ್ಲೆಗಳಲ್ಲಿಯೂ ಒಂದೊಂದು ಕ್ರೀಡೆಗಳು ಹೆಸರುವಾಸಿಯಾಗಿದ್ದು, ಆ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಹೋಬಳಿಮಟ್ಟದಿಂದ ಜಿಲ್ಲಾಮಟ್ಟದವರೆಗೆ ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿ ಸನ್ನದ್ಧಗೊಳಿಸಲಾಗುವುದು ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


