ಸಿಲಿಕಾನ್ ಸಿಟಿಯಲ್ಲಿ ಹಾಡ ಹಗಲೇ ಡಬಲ್ ಮರ್ಡರ್ ಆಗಿದೆ. ಏರೊನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಮತ್ತು ಸಿಇಒ ಬರ್ಬರ ಕೊಲೆ ಮಾಡಲಾಗಿದ್ದು ಇಡಿ ಸಿಲಿಕಾನ್ ಸಿಟಿ ಬೆಚ್ಚಿ ಬಿದ್ದಿದೆ. ಎಂಡಿ ಫಣೀಂದ್ರ ಸುಬ್ರಮಣ್ಯ ಹಾಗೂ ಸೀಒ ವಿನು ಕುಮಾರ್ ಕೊಲೆಯಾದ ದುರ್ದೈವಿಗಳು.
ಬೆಂಗಳೂರಿನ ಅಮೃತಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತನಿಂದ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ದೌಡಾಯಿಸಿದ್ದಾರೆ.
ಫೆಲಿಕ್ಸ್, ಏರೋನಿಕ್ಸ್ ಸಂಸ್ಥೆಯ ಹಳೆ ಉದ್ಯೋಗಿಯಾಗಿದ್ದು, ಕಂಪನಿ ಬಿಟ್ಟು ಸ್ವಂತ ಕಂಪನಿ ಸ್ಥಾಪಿಸಿದ್ದ. ಫಿಲಿಪ್ಸ್ ಉದ್ಯಮಕ್ಕೆ ಫಣೀಂದ್ರ ಎದುರಾಳಿಯಾಗಿದ್ದರಿಂದ ಫಣೀಂದ್ರ ಕೊಲೆಗೆ ಸಂಚು ರೂಪಿಸಿದ್ದ. ಪೂರ್ವ ಯೋಜನೆಯಂತೆ ಇಂದು ನಾಲ್ಕು ಗಂಟೆ ಸುಮಾರಿಗೆ ಕಂಪನಿಗೆ ತಲ್ವಾ ಮತ್ತು ಮಚ್ಚಿನ ಸಮೇತ ಬಂದ ಫಿಲಿಪ್ಸ್ ಫಣೀಂದ್ರ ಹಾಗೂ ವಿನುಕುಮಾರ್ ಮೇಲೆ ದಾಳಿ ಮಾಡಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


