ರಾಹುಲ್ ಗಾಂಧಿ ಅವರನ್ನು ಆನರ್ಹಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಮೌನ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಳಿಗ್ಗೆ 10: 30 ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಸೇರಲಿರುವ ಕಾಂಗ್ರೆಸ್ ನಾಯಕರುಗಳು, ನೇರವಾಗಿ ಮೌನ ಪ್ರತಿಭಟನೆ ನಡೆಸಲಿದ್ದು, ಸಂಜೆಯವರೆಗೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಅರ್ಜಿ ತಿರಸ್ಕರಿಸಿರುವ ನ್ಯಾಯಾಲಯದ ಹಿಂದೆ ಬಿಜೆಪಿ ಹೈಕಮಾಂಡ್ ನಾಯಕರ ಕೈವಾಡವಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.
ಈ ಪ್ರತಿಭಟನೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ನಾಯಕರುಗಳು ಸಾಥ್ ನೀಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


