ಬೆಂಗಳೂರು: ಹಳ್ಳಿಗಳಲ್ಲಿನ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಹಿಳೆಯರು ನಮಗೆ ಘೇರಾವ್ ಹಾಕಿ ಪ್ರಶ್ನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಏನು ಕ್ರಮ ಕೈಕೊಂಡಿದೆ ಎಂದು ಶಾಸಕ ರಾಜುಕಾಗೆ ಪ್ರಶ್ನೆ ಮಾಡಿದ್ದಾರೆ.
ರಾಜು ಕಾಗೆ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಉತ್ತರಿಸಿ ವಹಿವಾಟು ಆಧರಿಸಿ MSILಗೆ ಅವಕಾಶ ಕೊಟ್ಟಿದ್ದೇವೆ. ಈವರೆಗೂ ಗ್ರಾಮೀಣ ಭಾಗದಲ್ಲಿ ಯಾವುದೇ ಲೈಸೆನ್ಸ್ ಕೊಟ್ಟಿಲ್ಲ. ಹಳ್ಳಿಗಳ ಅಂಗಡಿಯಲ್ಲೂ ಮಾರಾಟ ಮಾಡ್ತಿರೋದು ಗಮನಕ್ಕೆ ಬಂದಿದೆ. ಮೈದಾನ, ಶಾಲೆಗಳ ಬಳಿಯೂ ಕೆಲವರು ಮದ್ಯ ಕುಡಿಯುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವರ ಜತೆ ಮಾತನಾಡಿ ಕಂಟ್ರೋಲ್ ಮಾಡುತ್ತೇನೆ ಎಂದು ವಿಧಾನಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


