nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026
    Facebook Twitter Instagram
    ಟ್ರೆಂಡಿಂಗ್
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಇಡೀ ದೇಶದಲ್ಲಿಯೇ ಅತ್ಯುತ್ತಮವಾದ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 12, 2023

    ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಇಡೀ ದೇಶದಲ್ಲಿಯೇ ಅತ್ಯುತ್ತಮವಾದ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminJuly 12, 2023No Comments2 Mins Read
    budget presentation

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿಯೇ ಅತ್ಯುತ್ತಮವಾದ ಬಜೆಟ್ ಮಂಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 5ಸಾವಿರ ಕೋಟಿ ರೂ. ಗಳನ್ನು ಬಜೆಟ್ ನಲ್ಲಿ ಸಿಎಂ ಅವರು ಒದಗಿಸಿದ್ದು, ಸದರಿ ಅನುದಾನದ ಸದ್ಬಳಕೆ ಮಾಡಿಕೊಂಡು ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.

    ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ 2013ರಿಂದ ಇಲ್ಲಿಯವರೆಗೆ ಸಾವಿರಾರು ಕೋಟಿ ರೂ. ಗಳು ಖರ್ಚು ಮಾಡಲಾಗಿದ್ದು, ಸರಕಾರದ ಪ್ರಯೋಜನ ಪಡೆದುಕೊಂಡಿರುವ ಪರಿಶಿಷ್ಟ ಪಂಗಡದ ಫಲಾನುಭವಿಗಳ ಜೀವನಮಟ್ಟದಲ್ಲಿ ಸುಧಾರಣೆಯಾಗಿದೆಯೇ ಎಂಬುದರ ಕುರಿತು ಇಲಾಖೆಯಿಂದ ಮೌಲ್ಯಮಾಪನ ನಡೆಸಲಾಗುವುದು ಎಂದು ಅವರು ಹೇಳಿದರು.


    Provided by
    Provided by

    ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1588. 23ಕೋಟಿ ರೂ. ಗಳನ್ನು ಒದಗಿಸಿದ್ದಾರೆ ಎಂದು ಸಚಿವ ನಾಗೇಂದ್ರ ಅವರು ತಿಳಿಸಿದರು. ಈಗ ನೀಡಲಾಗಿರುವ ಬಜೆಟ್ ನಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು. ಪರಿಶಿಷ್ಟ ಪಂಗಡಗಳ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ 50 ಕೋಟಿ ಮೀಸಲಿಡಲಾಗುತ್ತಿದೆ ಎಂದರು.

    ರಾಜ್ಯದ 8 ಜಿಲ್ಲೆಗಳಲ್ಲಿ ವಾಸ ಮಾಡುತ್ತಿರುವ 11 ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು 6 ತಿಂಗಳ ಬದಲು 12 ತಿಂಗಳಿಗೆ ವಿಸ್ತರಿಸಿ 50 ಕೋಟಿ ರೂ. ಗಳ ಮೀಸಲಿಡಲಾಗುತ್ತಿದೆ ಎಂದರು. ಅರಣ್ಯ ಉತ್ಪನ್ನಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆ, ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು TRIFED ಸಮನ್ವಯದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ ಎಂದರು. SCsp & TSP ಯೋಜನೆಗೆ ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ 9960 ಕೋಟಿ ಮೀಸಲು. SCsp/Tsp ಅಧಿನಿಯಮ 13ರಡಿ ಹಂಚಿಕೆಯಾಗುವ ಅನುದಾನವನ್ನು ಆಯಾ ಸಮುದಾಯಗಳ ಒಳಿತಿಗೆ ಬಳಕೆಯಾಗಬೇಕು ಎಂದು, ವಿಶೇಷ ಆದ್ಯತೆ ನೀಡಿ ಮುಖ್ಯಮಂತ್ರಿಗಳು ಸೆಕ್ಷನ್ 7ಡಿ ಅನ್ನು ಕೈಬಿಟ್ಟಿದ್ದಾರೆ ಎಂದು ಅವರು ವಿವರಿಸಿದರು.

    ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಸೇರಿದ 10 ಕ್ರೈಸ್ ವಸತಿ ಶಾಲೆ ಕ್ರೀಡಾ ಪ್ರೋತ್ಸಾಹಕ್ಕೆ ತಲಾ 2 ಕೋಟಿಯಂತೆ 20 ಕೋಟಿ ಮೀಸಲಿಡಲಾಗುತ್ತಿದೆ ಎಂದರು.

    ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿಶ್ವದಲ್ಲಿ 250 ರೊಳಗೆ ಯೂನಿವರ್ಸಿಟಿ ರಾಂಕಿಂಗ್ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ & ಸ್ನಾತಕೋತ್ತರ ಉನ್ನತ ಶಿಕ್ಷಣವನ್ನು ವಿದೇಶ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಈ ಯೋಜನೆ ಅನುಷ್ಠಾನಕ್ಕೆ 36 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದರು.

    ISEC ಸಂಸ್ಥೆಯಲ್ಲಿ ಪಿ. ಹೆಚ್. ಡಿ ಮಾಡುವ ಎಸ್. ಸಿ & ಎಸ್. ಟಿ ವಿದ್ಯಾರ್ಥಿಗಳಿಗೆ ಡಾ. ಬಿ. ಆರ್ ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ಕಾರ್ಪೊಸ್ ಫಂಡ್ ನೀಡಲಾಗುತ್ತಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನರು ನಾಲ್ಕು ಚಕ್ರ ಖರೀದಿ ಸಹಾಯ ಧನ ಶೇ. 75 ರಷ್ಟು 4 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದರು.

    ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ಪರಿಶಿಷ್ಟ ಪಂಗಡ ಉದ್ಯಮಿಗಳಿಗೆ 2 ಕೋಟಿ ಸರ್ಕಾರದಿಂದ ಸಮನಾಂತರ ಖಾತ್ರಿ ಯೋಜನೆ ಇದೀಗ ಇದ್ದು, ಸಮಾನಾಂತರ ಖಾತ್ರಿಯನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಿಗೂ ವಿಸ್ತರಣೆ ಮಾಡಲಾಗಿದೆ. ಪರಿಶಿಷ್ಟ ಪಂಗಡದ ಯುವಜನರಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯೊಂದಿಗೆ ಉದ್ಯಮಶೀಲತೆ ಅಭಿವೃದ್ಧಿ, ಕಾರ್ಯಕ್ರಮದಡಿ EDP ತರಬೇತಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.

    ಎಸ್. ಸಿ & ಎಸ್. ಟಿ ಒಂದು ಲಕ್ಷ ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಉತ್ಪನ್ನ ಚಟುವಟಿಕ ಕೈಗೊಳ್ಳಲು ಬ್ಯಾಂಕ್ ಸಾಲಕ್ಕೆ ಗರಿಷ್ಟ ಶೇ 20 ರಷ್ಟು ಸಹಾಯಧನ. ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ಜಾತಿ & ಪರಶಿಷ್ಟ ಪಂಗಡದ ಹಿರಿಯ ನಾಗರಿಕರ ಆರೈಕೆ & ನೆರವಿಗೆ ವೃದ್ಧಾಶ್ರಮ ಮಾಡಲು CRC & NGO ಸಹಭಾಗಿತ್ವ ಸ್ಥಾಪನೆ ಮಾಡಲಾಗುವುದು ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ರಾಯಚೂರು: ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು…

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.