ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಯನ್ನು ಜೂ. 11 ರಿಂದ ಜಾರಿಗೊಳಿಸಿದೆ. ಇನ್ನು ಜೂ. 11ರಿಂದ ಜುಲೈ 11ರವರೆಗೆ ಒಂದು ತಿಂಗಳ ಅವಧಿ ಪೂರ್ಣಗೊಂಡಿದೆ. ಒಂದು ತಿಂಗಳಲ್ಲಿ ಬರೋಬ್ಬರಿ 16. 73 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ.
ಜೂನ್ 11 ರಿಂದ ಜುಲೈ 10ರ ತನಕ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ ಗಳಲ್ಲಿ 32. 89 ಕೋಟಿ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಶೇ 50. 86ರಷ್ಟು ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಜೂನ್ 11 ರಿಂದ ಜುಲೈ 10ರ ತನಕ ಸಂಚಾರ ನಡೆಸಿದ ಅವಧಿಯಲ್ಲಿನ ಟಿಕೆಟ್ ಮೌಲ್ಯ ಹೀಗಿದೆ. ಕೆ ಎಸ್ ಆರ್ ಟಿಸಿ 151. 25 ಕೋಟಿ, ಬಿಎಂಟಿಸಿ 69, 56 ಕೋಟಿ, NWKRTC 103, 51 ಕೋಟಿ ಮತ್ತು ಕೆಕೆಆರ್‌ಟಿಸಿ 77. 62 ಕೋಟಿ. ಒಟ್ಟಾರೆ ಮೌಲ್ಯ 401. 94 ಕೋಟಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


