ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದಿ ಸಂದೇಶಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಮೇಲಿನ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಜೈನ್, ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಮತ್ತು ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಾಟ್ಸ್ಆ್ಯಪ್, ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಮ್ ಮತ್ತು ಇತರ ಅಪ್ಲಿಕೇಶನ್ ಗಳಲ್ಲಿ ಕೋಮು ಸೂಕ್ಷ್ಮ ಸಂದೇಶಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ ಎಂದು ಜೈನ್ ಹೇಳಿದ್ದಾರೆ. ಯಾವುದೇ ಧರ್ಮದ ಪರವಾಗಿ ಮತ್ತು ವಿರುದ್ಧವಾಗಿ ಸಂದೇಶಗಳನ್ನು ಪೋಸ್ಟ್ ಮಾಡುವ, ಹಂಚಿಕೊಳ್ಳುವ ಮತ್ತು ಕಾಮೆಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಎಲ್ಲಾ ಪೊಲೀಸ್ ಠಾಣೆಗಳ ಸಾಮಾಜಿಕ ಮಾಧ್ಯಮ ಸೆಲ್‌ಗಳಲ್ಲಿ ಕಟ್ಟುನಿಟ್ಟಾದ ನಿಗಾ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಪುನರಾವರ್ತಿತ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


