ರಾಜ್ಯದಲ್ಲಿ ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭವಾಗಿದ್ದು, 2007 ರಲ್ಲಿ ನೀವು ಜೆಡಿಎಸ್ ತೊರೆದು ರಾಜಿನಾಮೆ ಕೊಟ್ಟು ಕಾಂಗ್ರೆಸ್ ಸೇರಿ ಚುನಾವಣೆ ಗೆದ್ದು ಬಂದಿದ್ದಿರಿ, ಅದೇ ರೀತಿ ಅವರೂ ಮಾಡಿದ್ದಾರೆ. ಅವರಿಗೂ ನಿಮಗೂ ಏನು ವ್ಯತ್ಯಾಸ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷ 80 ರ ನಂತರ ಒಮ್ಮೆ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬಂದಿಲ್ಲ. ನಿಮ್ಮ ಪರಿಸ್ಥಿತಿಯೂ ಹಾಗೇ ಇದೇ. 2013 ರಲ್ಲಿ ಅಧಿಕಾರ ನಡೆಸಿ ಎಲ್ಲ ಭಾಗ್ಯಗಳನ್ನು ಕೊಟ್ಟರೂ ನೀವು ಯಾಕೆ ಸೋತಿರಿ, ನಿಮ್ಮನ್ನೂ ಜನರು ತಿರಸ್ಕರಿಸಿದ್ದರು ಎಂದರು.
2004 ರಲ್ಲಿ ಕಾಂಗ್ರೆಸ್ 65 ಸೀಟು ಬಂದಿತ್ತು, ಆಗೇನು ಬಹುಮತ ಇತ್ತಾ ಇವರಿಗೆ, 2018 ರಲ್ಲಿ ಇವರಿಗೆ ಬಹುಮತ ಇತ್ತಾ? ಯಾರಿಗೆ ಬಹುಮತದ ಪಾಠ ಹೇಳಿಕೊಳ್ಳುತ್ತಾರೆ ಇವರು. 1983 ರಲ್ಲೂ ಜನತಾ ಪಕ್ಷಕ್ಕೆ ಬಹುಮತ ಇರಲಿಲ್ಲ ಆಗಲೂ ಸರ್ಕಾರ ಮಾಡಿದ್ದರು. ಆಗಿನಿಂದಲೂ ಮೈತ್ರಿ ಸರ್ಕಾರ ಆರಂಭವಾಗಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


