ನಗರದಲ್ಲಿ ಶುಕ್ರವಾರ ಸಂಜೆ ವೇಳೆ ಭಾರೀ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಹೈಗೌಂಡ್ಸ್ ಪೊಲೀಸ್ ಠಾಣೆ ಬಳಿ
ಬೃಹತ್ ಮರವೊಂದು ರಸ್ತೆಗುರುಳಿದೆ.
ಮರ ಮೂರು ಕಾರುಗಳ ಮೇಲೆ ಬಿದ್ದಿದ್ದು, ಮರ ಮುಖ್ಯ ರಸ್ತೆ ಮೇಲೆಯೇ ಬಿದ್ದಿರುವ ಹಿನ್ನೆಲೆ ಹೈಗೌಂಡ್ಸ್ ಠಾಣೆ ಸುತ್ತಾ ಮುತ್ತ ಟ್ರಾಫಿಕ್ ಜಾಂ ಉಂಟಾಗಿದೆ. ಕಾರುಗಳು ಸಂಪೂರ್ಣ ಜಖಂ ಆಗಿವೆ. ಕಾರಿನಲ್ಲಿ ಇದ್ದೋರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಿಬಿಎಂಪಿ ಸಿಬ್ಬಂದಿಯಿಂದ ಮರ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


