ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಪುಡಿಪುಡಿ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬರಿಗೆ ವರ್ತೂರು ಬಳಿ ಕಾರಿನಲ್ಲಿ ಹೋಗುವಾಗ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದಾಗ ಮುಂದುಗಡೆ ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡುತ್ತಿದ್ದ ಆರೋಪಿಗಳಿಗೆ ಕಾರು ಚಾಲಕ ದಾರಿ ಬಿಡುವಂತೆ ಹಾರ್ನ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಕೆಲ ದೂರ ಹೋದ ಬಳಿಕ ಕಾರನ್ನು ಅಡ್ಡಗಟ್ಟಿದ್ದಾರೆ. ಅಪಾಯದ ಮೂನ್ಸೂಚನೆ ಅರಿತ ಕಾರು ಚಾಲಕ ತಕ್ಷಣವೇ ಕಾರನ್ನು ತಾನು ಬಂದ ದಾರಿಯಲ್ಲೇ ರಿವರ್ಸ್ ತೆಗೆದುಕೊಂಡು ತಪ್ಪಿಸಿಕೊಂಡು ಹೋಗಿದ್ದರು.
ಆದರೆ, ಆರೋಪಿಗಳು ಕಾರನ್ನು ಫಾಲೋ ಮಾಡಿಕೊಂಡು ಬಂದು ಗುಂಜೂರು ಬಳಿ ಅಪಾರ್ಟ್‌ಮೆಂಟ್ ಸಮೀಪ ಬಂದು ಗಲಾಟೆ ಮಾಡಿದ್ದರು. ಎಂಟ್ರಿ ಗೇಟ್ ಬಳಿ ಕಾರು ಅಡ್ಡಗಟ್ಟಿ ಗಾಜುಗಳನ್ನು ಒಡೆದು ದಾಂಧಲೆ ಮಾಡಿದ್ದರು. ಆರೋಪಿಗಳು ದುಷ್ಕೃತ್ಯ ಹಾಗೂ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಈ ಬಗ್ಗೆ ಟ್ವಿಟರ್ ಮೂಲಕ ಕಾರಿನ ಮಾಲೀಕ ಪೊಲೀಸರಿಗೆ ದೂರು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


