ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಬಿ ಖಾತೆನೀಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಜಿ. ಡಿ ಹರೀಶ್ ಗೌಡ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹಿಂಖಾನ್ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಚಿವ ಸುರೇಶ್, ಬೆಂಗಳೂರಿನಲ್ಲಿ ಭೂ ಪರಿವರ್ತನೆಯಾದ ನಿವೇಶನ ಮತ್ತು ಕಟ್ಟಡಗಳಿಗೆ ಎ ಖಾತೆ, ಭೂ ಪರಿವರ್ತನೆಯಾಗದ ಸ್ವತ್ತುಗಳಿಗೆ ಬಿ ಖಾತೆ ನೀಡಲಾಗುತ್ತಿದೆ. ಅದೇ ರೀತಿ ರಾಜ್ಯದ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತೆಗೆ ಅವಕಾಶ ಕಲ್ಪಿಸಿದರೆ ಸರ್ಕಾರಕ್ಕೂ ಎರಡು ಸಾವಿರ ಕೋಟಿ ಆದಾಯ ಬರಲಿದೆ ಎಂದರು.
ಸಂಬಂಧ ಪೌರಾಡಳಿತ ಸಚಿವರ ಜತೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಖಾತೆ ಬಿಕ್ಕಟ್ಟು ಬಹಳಷ್ಟು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇರುವುದರಿಂದ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿದರೂ ಆದಾಯ ಬರುತ್ತಿಲ್ಲ ಎಂದು ಹೇಳಿದರು. ಇದಕ್ಕೂ ಮುನ್ನ ಉತ್ತರ ನೀಡಿದ ಪೌರಾಡಳಿತ ಸಚಿವ ರಹಿಂಖಾನ್ ಅವರು, ಹುಣಸೂರು ನಗರಸಭೆ ವ್ಯಾಪ್ತಿಯಲ್ಲಿ 81 ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡಿವೆ. ಗ್ರಾಮಾಂತರ, ನಗರ ಯೋಜನಾ ಕಚೇರಿಯಿಂದ ಅನುಮೋದನೆಗೊಂಡ ಬಡಾವಣೆ ಗ್ರಾಮಠಾಣಾ ನಿವೇಶನಗಳಿಗೆ ನಮೂನೆ -3 ಅನ್ನು ನೀಡಲಾಗುತ್ತಿದೆ. ಯೋಜನಾ ಇಲಾಖೆಯಿಂದ ಅನುಮೋದನೆಯಾಗದ ಬಡಾವಣೆಗಳಿಗೆ 2018ರ ಜನವರಿ 5 ರಿಂದ ನಮೂನೆ-3.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


