ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.ನಿ.ಇವರು ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರುರಾದ ಎನ್.ಚಲುವರಾಯಸ್ವಾಮಿಯವರು ಮತ್ತು ತಾಲ್ಲೂಕಿನ ಶಾಸಕರಾದ ಎಚ್.ಟಿ.ಮಂಜು ರವರು ಉದ್ಘಾಟನೆ ಮಾಡಿದರು.
ಸಚಿವರಿಗೆ ಮತ್ತು ಶಾಸಕರಿಗೆ ಅಕ್ಕಿಹೆಬ್ಬಾಳು ಹೋಬಳಿಯ ಜನತೆ ಪಟಾಕಿ ಸಿಡಿಸಿ ವಾದ್ಯಮೇಳದೊಂದಿಗೆ ಅದ್ದೂರಿ ಸ್ವಾಗತ ಕೋರಿದ್ದರು. ಕಟ್ಟಡದ ಉದ್ಘಾಟನೆ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಆರ್.ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಶಾಸಕ ಎಚ್.ಟಿ.ಮಂಜು ರವರು ಜ್ಯೋತಿ ಬೆಳಗಿಸುವ ಮೂಲಕ ಸಚಿವ ಎನ್. ಚಲುವರಾಯಸ್ವಾಮಿಯವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ಪದಾಧಿಕಾರಿಗಳು.ಹೋಬಳಿಯ ಸುತ್ತ ಮುತ್ತ ಸಾರ್ವಜನಿಕರುಉಪಸ್ಥಿತರಿದ್ದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


