ಬೆಂಗಳೂರು: ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಕೊಡಗರು ಎಂದು ನಮೂದಾಗಿರುವ ಕೊಡವ ಸಮುದಾಯದ ಹೆಸರನ್ನು ಕೊಡವ ಎಂದು ತಿದ್ದುಪಡಿ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲು ಕೂಡ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೊಡವ ರಾಷ್ಟ್ರೀಯ ಮಂಡಳಿ ಎನ್.ಯು ನಾಚಪ್ಪ ಅವರ ನೇತೃತ್ವದ 30 ಜನರ ನಿಯೋಗ ಹಾಗೂ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ, ಕೆ.ಟಿ.ಪೆಮ್ಮಯ್ಯ, ಉಪಾಧ್ಯಕ್ಷರಾದ ಕರ್ನಲ್ ವಿವೇಕ್ ಮುತ್ತಣ್ಣ, ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


