ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ನಡೆಯುತ್ತಿರುವ ಕೊಲೆಗಳು, ಸರ್ಕಾರದ ಪೋಷಿತ ಎಂಬ ಗಂಭೀರ ಆರೋಪವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಡಿದ್ದಾರೆ.
ಇಂದು ಮಾಧ್ಯಮಗಳ ಮುಂದೆ ಮಾತನ್ನಾಡಿದ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಬೀಗುತ್ತಿದೆ. ಆದ್ರೆ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕೊಲೆಗಳೆಲ್ಲಾ ಕಾಂಗ್ರೆಸ್ ಸರ್ಕಾರದ ಪೋಷಿತವೇ ಹೊರತು, ಬೇರೇನೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದರ ಜೊತೆಗೆ ಕಾಂಗ್ರೆಸ್ ನಾಯಕರನ್ನು ಕೇಳಿದ್ರೆ 136 ಸ್ಥಾನ ಬಂದಿದೆ ಎಂದು ಬೀಗುತ್ತಾರೆ. ಈ ಕೊಲೆಗಳಿಗೆಲ್ಲಾ ಮುಂದೆ ನೀವೇ ಉತ್ತರಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


