ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ, ‘ಎ’ ಕಂಡಿಕೆಯಲ್ಲಿ ಸೀಟು ಬಯಸಿರುವ ಅಭ್ಯರ್ಥಿಗಳಿಗೆ ಕೊನೆಯದಾಗಿ ಜುಲೈ 17ರಂದು ಅಂತಿಮ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ, “15 ದಿನಗಳಿಂದ ಅಭ್ಯರ್ಥಿಗಳ ವ್ಯಾಸಂಗ ಪ್ರಮಾಣಪತ್ರ ಮತ್ತಿತರ ದಾಖಲೆಗಳ ಪರಿಶೀಲನೆಯು ಬಿಇಒ ಕಚೇರಿಗಳಲ್ಲಿ ನಡೆದಿದ್ದು, ಇಂದು ಕೊನೆ ದಿನವಾಗಿತ್ತು. ಆದರೂ ಕೆಲವು ವಿದ್ಯಾರ್ಥಿಗಳು ಈ ಪ್ರಕ್ರಿಯೆ ಪೂರೈಸಿಲ್ಲ. ಆದ್ದರಿಂದ ಈಗ ಕೊನೆಯ ಅವಕಾಶವನ್ನು ಕೊಡಲಾಗುತ್ತಿದೆ. ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಲು ಇದು ಕಡ್ಡಾಯವಾಗಿದೆ ” ಎಂದಿದ್ದಾರೆ.
ಎಂಜಿನಿಯರಿಂಗ್, ಆರ್ಕಿಟೆಕ್ಟರ್, ಯೋಗ ಮತ್ತು ನ್ಯಾಚುರೋಪಥಿ, ವೆಟರ್ನರಿ, ಕೃಷಿ ವಿಜ್ಞಾನ, ಬಿ. ಫಾರ್ಮ ಮತ್ತು ಡಿ. ಫಾರ್ಮ ಕೋರ್ಸುಗಳಿಗೆ ಈ ಪ್ರಕ್ರಿಯೆ ಅನ್ವಯಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA