nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಸಭೆ:  ಸಚಿವ ಈಶ್ವರ ಖಂಡ್ರೆ
    ಜಿಲ್ಲಾ ಸುದ್ದಿ July 17, 2023

    ಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಸಭೆ:  ಸಚಿವ ಈಶ್ವರ ಖಂಡ್ರೆ

    By adminJuly 17, 2023No Comments2 Mins Read
    kabini

    ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ  ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

    ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಜನರ ಅಹವಾಲಿಗೆ ಸ್ಪಂದಿಸಿದರು.


    Provided by
    Provided by

    ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ ಇರುವ ಗೊಂದಲದ ಕುರಿತಂತೆ  ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಒದಗಿಸಲು ಶೀಘ್ರವೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಿ, ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲಾ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ  ಕುರಿತಂತೆ ಪರ್ಯಲೋಚಿಸುವುದಾಗಿ ಸಚಿವರು ತಿಳಿಸಿದರು.

    ಅನಿಲ್ ಚಿಕ್ಕಮಾದು ಅವರು ತಮ್ಮ ಕ್ಷೇತ್ರದಲ್ಲಿ ಆನೆಗಳ ಹಾವಳಿ ಇದ್ದು ಕನಿಷ್ಠ 72 ಕಿಲೋಮೀಟರ್ ರೈಲ್ವೆ ಬ್ಯಾರಿಕೆಡ್ ನಿರ್ಮಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು ಒಂದೇ ವರ್ಷದಲ್ಲಿ 72 ಕಿಲೋಮೀಟರ್ ಒಂದೇ ಭಾಗದಲ್ಲಿ  ನಿರ್ಮಿಸಲು ಸಾಧ್ಯವಿಲ್ಲ, ಆದರೆ ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

    ತಾವು ಇಂದು ಕಬಿನಿ ವ್ಯಾಪ್ತಿಯ ಅಂತರಸಂತೆ ಅರಣ್ಯ ಪ್ರದೇಶದಲ್ಲಿ ಸೌರಬೇಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಪರಿಶೀಲಿಸಿದ್ದಾಗಿ ತಿಳಿಸಿದ ಸಚಿವರು ಇದೇ ಸಂದರ್ಭದಲ್ಲಿ ಅರಣ್ಯದಲ್ಲೇ ವಾಸಿಸುವ ಆದಿವಾಸಿಗಳ ಸಮಸ್ಯೆಯನ್ನು ಆಲಿಸಿದ್ದಾಗಿ ತಿಳಿಸಿದರು.

    ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

    ಇದೇ ಸಂದರ್ಭದಲ್ಲಿ ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಹವಾಲುಗಳನ್ನು ಸಚಿವರು ಪರಿಶೀಲಿಸಿ 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲು ಉಳಿಮೆ ಮಾಡುತ್ತಿರುವ ಮತ್ತು   ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುಔರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಎಂದು ಸೂಚಿಸಿದರು.

    ಹಿರಿಯ ಐಎಫ್ಎಸ್ ಅಧಿಕಾರಿಗಳಾದ ರಂಗರಾವ್, ಕುಮಾರ್ ಪುಷ್ಕರ್, ರಮೇಶ್ ಕುಮಾರ್, ಹರ್ಷಕುಮಾರ್ ಮತ್ತು ಎಚ್ ಡಿ ಕೋಟೆಯ ತಹಶೀಲ್ದಾರ್ ಸಭೆಯಲ್ಲಿ ಭಾಗವಹಿಸಿದ್ದರು.

    ಮಾಜಿ ಶಾಸಕ ಸಂದೇಶ್ ನಾಗರಾಜ್ ಅವರು ಈ ಸಭೆಯಲ್ಲಿ ಪಾಲ್ಗೊಂಡು ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.