ಇದೇ 17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆಯಲಿರುವ ಯುಪಿಎ ವಿಪಕ್ಷಗಳ ಸಭೆಗೆ ಆಗಮಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕರುಗಳನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸ್ವಾಗತಿಸಿದ್ದಾರೆ.
ಕೇಂದ್ರ ಸರ್ಕಾರ ಜನಪ್ರಿಯ ಅರವಿಂದ್ ಕೇಜ್ರಿವಾಲ್ ರವರ ದೆಹಲಿ ಸರ್ಕಾರದ ವಿರುದ್ಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಸಭೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಬೆಂಬಲಿಸಿರುವ ನಡೆ ಉತ್ತಮವಾದದ್ದು. ಬಿ ಜೆ ಪಿ ಯ ನಿರಂಕುಶ ಪ್ರಭುತ್ವವನ್ನು ರಾಷ್ಟ್ರದಿಂದ ಹೊಡೆದೋಡಿಸುವ ನಿಟ್ಟಿನಲ್ಲಿ ರಾಷ್ಟ್ರದ ವಿಪಕ್ಷಗಳೆಲ್ಲ ಒಂದುಗೂಡಿ ನಡೆಸುತ್ತಿರುವ ಹೋರಾಟಕ್ಕೆ, ಆಮ್ ಆದ್ಮಿ ಪಕ್ಷ ಸದಾ ಕೈ ಜೋಡಿಸುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
‘ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಭೆಯು ಈ ರಾಷ್ಟ್ರದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಂದಾಗಿ ಹೋರಾಟ ಮಾಡಿ ಮೋದಿ ಪ್ರಭುತ್ವವನ್ನು ರಾಷ್ಟ್ರದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಯಶಸ್ವಿಯಾಗಲಿದೆ ‘ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


