ಕನ್ನಡೇತರ ಅಧಿಕಾರಿಗಳು, ನೌಕರರಿಗೆ ಕನ್ನಡ ಕಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕನ್ನಡ ಕಲಿಕಾ ಶಿಬಿರವನ್ನು ಪ್ರಾರಂಭಿಸಿದೆ. ರಾಜಾಜಿ ನಗರದಲ್ಲಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಸಂಸ್ಥೆಯಲ್ಲಿ ನಡೆಸಲಾದ ಶಿಬಿರವನ್ನು ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ ಉದ್ಘಾಟಿಸಿದರು. ಶಿಬಿರದಲ್ಲಿ ಅಲ್ಲಿನ ಅಧಿಕಾರಿಗಳು ಹಾಗೂ ನೌಕರರಿಗೆ ಕನ್ನಡ ಕಲಿಸಲಾಯಿತು.
‘ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಕಾರ್ಖಾನೆಗಳು, ಬ್ಯಾಂಕ್ ಗಳು, ಅಪಾರ್ಟ್‌ಮೆಂಟ್ ಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಕನ್ನಡೇತರರು ವಾಸಿಸುವ ಪ್ರದೇಶಗಳಲ್ಲಿ ಕನ್ನಡ ಕಲಿಕಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದು ಸಂತೋಷ ಹಾನಗಲ್ಲ ತಿಳಿಸಿದರು. ‘ಕನ್ನಡ ಕಲಿಕಾ ತರಗತಿಗಳನ್ನು ಪ್ರಾರಂಭಿಸಲು ಹಾಗೂ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡವನ್ನು ಕಡ್ಡಾಯಗೊಳಿಸಲು ಸರ್ಕಾರ ಬದ್ಧವಾಗಿದೆ. ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ಮಸೂದೆ-2022 ಅನುಮೋದನೆಗೊಂಡಿದೆ. ಕನ್ನಡ ಬಳಕೆಗೆ ನಿರಾಕರಿಸಿದಲ್ಲಿ ಶಿಕ್ಷೆಗೆ ಅವಕಾಶವಿದೆ’ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


