ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿದ್ದ 4.5 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ‘ನಗರ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಕೆರೆ, ಕುಂಟೆ, ಗೋಮಾಳ, ಸ್ಮಶಾನ ಹಾಗೂ ರಾಜಕಾಲುವೆ ಒತ್ತುವರಿ ಆಗಿತ್ತು. ಒಟ್ಟು 1 ಎಕರೆ 13 ಗುಂಟೆ ಒತ್ತುವರಿ ತೆರವು ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ. ಎ. ದಯಾನಂದ ಮಾಹಿತಿ ನೀಡಿದ್ದಾರೆ.
ಯಲಹಂಕ ತಾಲ್ಲೂಕಿನಲ್ಲಿ ಸರ್ಕಾರಿ ಗೋಮಾಳ, ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಬೀಳು ಜಮೀನು, ಬೆಂಗಳೂರು ಉತ್ತರ, ಆನೇಕಲ್ ತಾಲ್ಲೂಕಿನಲ್ಲಿ ಖರಾಬು ಜಮೀನು, ಯಲಹಂಕ ಹಾಗೂ ಆನೇಕಲ್ ನಲ್ಲಿ ಸ್ಮಶಾನ ಜಮೀನು ಒತ್ತುವರಿ ಆಗಿತ್ತು ಎಂದು ವಿವರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


