ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ರೈತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಕುಟುಕಿದ್ದಾರೆ. ಮುಂಗಾರು ವಿಫಲವಾಗಿ ರೈತರು ಬಿತ್ತಿರುವ ಬೆಳೆ ಮೊಳಕೆಯೊಡೆಯದೇ ವಿಫಲವಾಗಿದೆ.
ಹಲವಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ವರದಿಗಳು ಬರುತ್ತಿವೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ, ಈ ಹಿಂದೆ 2013-18 ರಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಅದು ಮರುಕಳಿಸುವಂತೆ ಕಾಣಿಸುತ್ತಿದೆ. ನಾನು ಇದನ್ನು ಖಂಡಿಸುತ್ತೇನೆ. ಸರ್ಕಾರ ಕೂಡಲೇ ಎಲ್ಲ ಕ್ರಮ ಕೈಗೊಳ್ಳಲು ನಾನು ಆಗ್ರಹಿಸುತ್ತೇನೆ.
ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ವಿರೋಧ ಪಕ್ಷಗಳ ಸಭೆ ನಡೆಸುವುದರಲ್ಲಿ ಎಲ್ಲ ಸಮಯ ತೊಡಗಿಸಿದ್ದಾರೆ. ಅವರಿಗೆ ರೈತರ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಇದೊಂದು ರೈತ ವಿರೋಧಿ ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


