nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಮ್ಮನ್ ಚಾಂಡಿ ನಿಧನಕ್ಕೆ ಸಿಎಂ ಸಂತಾಪ
    ರಾಜ್ಯ ಸುದ್ದಿ July 18, 2023

    ಉಮ್ಮನ್ ಚಾಂಡಿ ನಿಧನಕ್ಕೆ ಸಿಎಂ ಸಂತಾಪ

    By adminJuly 18, 2023No Comments2 Mins Read
    siddharamayya

    ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಉಮ್ಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು. 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.


    Provided by
    Provided by

    1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುದುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

    ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು. ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ಚುಗೆ ಸೂಚಿಸಿದ್ದರು.

    ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ. ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಉಮ್ಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಪಾವಗಡ: ನಿರುದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕುವೆಂಪು ನಗರದ ಕೆಇಬಿ ಕಚೇರಿ ಪಕ್ಕದಲ್ಲಿ ಸೋಮವಾರ…

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.