ಗೃಹಲಕ್ಷ್ಮಿ ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯತೆ ಇಲ್ಲ. ಪಡಿತರ ಚೀಟಿಯ ಸಂಖ್ಯೆಯನ್ನ 8147500500 ಈ ಸಂಖ್ಯೆ ಎಸ್ ಎಂ ಎಸ್ ಮಾಡಬಹುದು. ಕೂಡಲೇ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಹೋಗುತ್ತೆ. ಹೀಗಾಗಿ ಯೋಜನೆಯಲ್ಲಿ ಯಾವುದೇ ಗೊಂದಲ ಇಲ್ಲ.
ಯಾವ ಕೇಂದ್ರ, ದಿನಾಂಕ, ಸಮಯ ಎಲ್ಲ ಮಾಹಿತಿಯೂ ಫಲಾನುಭವಿ ಮಹಿಳೆಗೆ ಹೋಗಲಿದೆ. ಇನ್ನೂ ಗೊಂದಲವಿದ್ದರೆ ಇಲಾಖೆ 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಬೇರೆ ಯೋಜನೆಗಳಲ್ಲಿ ತೊಂದರೆ ಆದ ಕಾರಣ, ಈ ಯೋಜನೆಯನ್ನ ಆರಂಭದಲ್ಲೇ ಸರಳವಾಗಿ ಮಾಡಿದ್ದೀವಿ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


