ಇಂದು ಹೆ. ದೇ. ಕೋಟೆ ತಾಲ್ಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ರೈತರ ಹಲವಾರು ಸಮಸ್ಯೆಗಳ ಕುರಿತು ತಹಶೀಲ್ದಾರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ರೈತ ಮುಖಂಡರು ಚರ್ಚಿಸುತ್ತಾ, ಕೃಷಿ ಇಲಾಖೆಯಿಂದ ಸರಿಯಾದ ಸಮಯದಲ್ಲಿ ಬಿತ್ತನೆ ಬೀಜ ಸಿಗುತ್ತಿಲ್ಲ. ತಾರಕ ನೀರಾವರಿ ಇಲಾಖೆಯಿಂದ ಕಾಲುವೆಗಳನ್ನು ಹೂಳೆತ್ತಿಸಿ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ಕಂದಾಯ ಇಲಾಖೆಯಿಂದ ಕೆರೆ ಒತ್ತುವರಿ ತೆರವುಗೊಳಿಸಿ ಕೊಡಬೇಕು. ಗೊಬ್ಬರದ ಅಂಗಡಿಗಳಲ್ಲಿ ಕದ್ದು ಮುಚ್ಚಿ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದಾರೆ. ಕೆಲವು ಇಲಾಖೆಗಳಿಂದ ರೈತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ ಸಣ್ಣರಾಮಪ್ಪ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಾಕೀತು ಮಾಡಿ ಇನ್ನೂ ಮುಂದೆ ಈಗಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು. ಹಾಗೇ ಮುಂದಿನ ಸಭೆಯೊಳಗೆ ರೈತ ಮುಖಂಡರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಿ ಮುಂದಿನ ಸಭೆಗೆ ಪ್ರಗತಿಯ ಬಗ್ಗೆ ತಿಳಿಸಲಾಗುವುದು ಎಂದರು. ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತ ಮುಖಂಡರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಇಲಾಖಾವಾರು ಅಧಿಕಾರಿಗಳು ಭಾಗವಹಿಸಿದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


