ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.
ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ನಾಲ್ಕು ವರ್ಷಗಳ ಬಿಜೆಪಿ ದುರಾಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿಯವರು ನಾಲ್ಕು ವರ್ಷ ಜನತೆಗೆ ಚಿಪ್ಪು ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಜನ ಆ ಪಕ್ಷಕ್ಕೆ ಚಿಪ್ಪು ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಜನ ಚಿಪ್ಪು ನೀಡುವುದು ಗ್ಯಾರಂಟಿ ಎಂದು ಛೇಡಿಸಿದರು.
9 ವರ್ಷದ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. ವಿದೇಶದಿಂದ ಕಪ್ಪು ಹಣ ತರುತ್ತೇವೆ. ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಸುಳ್ಳು ಆಶ್ವಾಸನೆ ನೀಡುತ್ತಾ ಜನತೆಗೆ ಮೋಸ ಮಾಡಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. 9 ವರ್ಷದಲ್ಲಿ ದೇಶ ಹಾಳು ಮಾಡಲು ಬೇಕಾದ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


