ಮಧುಗಿರಿ: ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಒಣಜಾಕ್ಷಮ್ಮ ಅಧ್ಯಕ್ಷೆಯಾಗಿ, ಉಪಾಧ್ಯಕ್ಷೆಯಾಗಿ ಕೆ.ಟಿ.ಸವಿತಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಲಕ್ಷ್ಮೀನಾರಾಯಣ ಮಾತನಾಡಿ, ಸಚಿವರಾದ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರ ಸೂಚನೆ ಮೇರೆಗೆ ಎಲ್ಲಾ ಸದಸ್ಯರ ಸಮಕ್ಷ ಬೆಂಬಲದೊಂದಿಗೆ ಒಣಜಾಕ್ಷಮ್ಮ ಅಧ್ಯಕ್ಷೆಯಾಗಿ, ಉಪಾಧ್ಯಕ್ಷೆಯಾಗಿ ಕೆ.ಟಿ. ಸವಿತಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪಂಚಾಯಿತಿಯ ಸರ್ವೋತ್ತಮುಖ ಅಭಿವೃದ್ಧಿಗಾಗಿ ಕೆಲಸ ಮಾಡಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಜಣ್ಣ ಟಿ.ಪಿ., ಚುನಾವಣೆ ಅಧಿಕಾರಿ ಡಾ.ಸಿದ್ದನಗೌಡ, ಪಿಡಿಒ ಬಾಲಕೃಷ್ಣ ಹಾಗೂ ಸದಸ್ಯರು ಇತರರು ಇದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA