ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ 10 ಬಿಜೆಪಿ ಶಾಸಕರ ಅಮಾನತಾದ ಬಳಿಕ, ಆವರಣದಲ್ಲಿ ನೂಕಾಟ ತಳ್ಳಾಟ ಏರ್ಪಟ್ಟು ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದರು. ಸಸ್ಪೆಂಡ್ ಆದ ಬಳಿಕವೂ ಬಿಜೆಪಿ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾರ್ಷಲ್ ಗಳು ಅಮಾನತಾದ ಶಾಸಕರನ್ನು ಸದನದಿಂದ ಹೊರಹಾಕುವ ಕೆಲಸ ಮಾಡಿದರು.
ಈ ವೇಳೆ ಸ್ಥಳದಲ್ಲಿ ನೂಕಾಟ ತಳ್ಳಾಟ ಜೋರಾಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯ ಆವರಣದಲ್ಲಿ ಕುಸಿದು ಬಿದ್ದಿದ್ದಾರೆ. ಯತ್ನಾಳ್ ಅವರಿಗೆ ಬಿಪಿ ಏರಿಕೆ ಹಾಗೂ ಶುಗರ್ ನಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಇದೀಗ ಯತ್ನಾಳ್ ಅವರನ್ನು ಚಿಕಿತ್ಸೆಗೆ ಅಂಬುಲೆನ್ಸ್ನಲ್ಲಿ ಪೋರ್ಟಿಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


