ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಬೂದಗವಿ ಗ್ರಾಮ ಪಂಚಾಯತಿಯ ಸಹಭಾಗಿತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು..
ಮರೇನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಶಾಲಾ ಮಕ್ಕಳಿಂದ ಪ್ರಾರ್ಥನಾ ಗೀತೆ ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ತಾಲೂಕು ದಂಡಾಧಿಕಾರಿ ಮುನಿಶಾಮಿ ರೆಡ್ಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೂದಗವಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ಶ್ರೀನಿವಾಸ್ ಎಂ ಎಸ್ ಮತ್ತು ನೂತನ ಉಪಾಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.15 ಕ್ಕೂ ಹೆಚ್ಚು ಜನ ವೃದ್ಧರಿಗೆ ಸ್ಥಳದಲ್ಲಿಯೇ ಪಿಂಚಣಿ ಮಾಶಾಸನ ಆದೇಶ ಪತ್ರವನ್ನು ಗ್ರೇಟ್ 2 ತಹಶೀಲ್ದಾರ್ ನರಸಿಂಹಮೂರ್ತಿ ವಿತರಣೆ ಮಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು,ಗ್ರಾಮ ಪಂಚಾಯತಿ ಸದಸ್ಯರು,ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರು,ಗ್ರಾಮದ ಹಿರಿಯರು ಮತ್ತು ಗ್ರಾಮಸ್ಥರು ಹಾಜರಿದ್ದರು..
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


