ವಿಧಾನಸಭೆಯಲ್ಲಿ ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ. ಸಭಾಧ್ಯಕ್ಷರ ಪೀಠವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ನಿಮಿಷದಲ್ಲಿ ಬಗೆಹರಿಸುವ ವಿಷಯವನ್ನು ಇಷ್ಟು ದೂರ ಎಳೆದು ತರಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
ಸರಕಾರ ಗಂಭೀರ ಲೋಪ ಎಸಗಿದೆ. ಆಗಿರುವ ತಪ್ಪನ್ನು ಒಪ್ಪಿಕೊಳ್ಳುವುದು ಬಿಟ್ಟಿ ಭಂಡತನ ಪ್ರದರ್ಶನ ಮಾಡುತ್ತಿದೆ ಎಂದು ದೂರಿದರು.ವಿಧಾನಸಭೆಯಲ್ಲಿ ನಡೆದಿರುವ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಘಟಬಂಧನ್ ಸಭೆಗೆ ಬಂದಿದ್ದ ಹೊರರಾಜ್ಯದ ಗಣ್ಯರಿಗೆ ಉಪಚಾರ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದ್ದು ತಪ್ಪು. ಈ ಸದನದಲ್ಲಿ ಪ್ರಸ್ತಾಪ ಮಾಡಿದ ಪ್ರತಿಪಕ್ಷಗಳ ಮನವಿಯ ಬಗ್ಗೆ ಸರಕಾರ ಭಂಡತನ ತೋರಿದೆ. ಸ್ವೀಕರ್ ಕಚೇರಿಯಲ್ಲಿ ಸಂಧಾನ ಸಭೆ ನಡೆಸಿದ ವೇಳೆಯಲ್ಲೂ ಕಾಂಗ್ರೆಸ್ ನಾಯಕರು, ನಾವೇನೂ ಎನು ತಪ್ಪು ಮಾಡಿಲ್ಲವೆಂದು ಪ್ರತಿಷ್ಠೆ ತೋರಿದರು ಎಂದರು ಮಾಜಿ ಮುಖ್ಯಮಂತ್ರಿಗಳು.
ಎರಡು ನಿಮಿಷಗಳ ಬಗೆಹರಿಸಬಹುದಾಗಿದ್ದ ವಿಷಯವನ್ನು ಇಷ್ಟು ದೂರ ಎಳೆದು ತಂದಿದ್ದಾರೆ. ಆಗಿದ್ದು ಆಯಿತು, ಮುಂದೆ ಈ ರೀತಿ ಆಗಲ್ಲ ಅಂತ ಹೇಳಿದ್ದರೆ ಸಾಕಿತ್ತು. ವಿಷಾದವನ್ನೂ ವ್ಯಕ್ತಪಡಿಸುವ ಅವಶ್ಯಕತೆಯೂ ಇರಲಿಲ್ಲ. ಆದರೆ, ಸ್ವೀಕರ್ ಪ್ರತಿಪಕ್ಷ ಶಾಸಕರನ್ನು ದೇಶದೋಹ್ರಿಗಳು ಎಂದರು. ಸಿಎಂ ಹೇಳಿದರೂ ಅಂತ ಶಾಸಕರನ್ನು ಕೊನೆಪಕ್ಷ ಊಟಕ್ಕೆ ಬಿಡದೆ ಎದ್ದು ಹೋದರು. ಇಂಥ ನಡವಳಿಕೆಯನ್ನು ಹಿಂದೆ ನಾನೆಂದೂ ನೋಡಿರಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಸ್ವೀಕರ್ ಏಕಪಕ್ಷೀಯವಾಗಿ ಕೆಲಸ ಮಾಡ್ತಾ ಇದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಸ್ಪೀಕರ್ ಅವರಿಗೆ ಸಿಎಂ ಅವರು ಸನ್ನೆ ಮೂಲಕ ಸೂಚನೆ ನೀಡಿದ್ದಾರೆ ಎಂದು ಸದನದ ಬಾವಿಯಲ್ಲಿ ಇದ್ದವರೇ ಹೇಳಿದರು ಎಂದು ಅವರು ತಿಳಿಸಿದರು.
ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಪಕ್ಷಕ್ಕೆ ಸದನದಲ್ಲಿ ಹೇಗೆ ವರ್ತನೆ ಮಾಡಬೇಕು ಎಂಬುದೇ ಗೊತ್ತಿಲ್ಲ. ಅಜ್ಞಾನದಿಂದ ಸರ್ಕಾರ ನಡೆಸುತ್ತಿದ್ದಾರೆ. ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಇಷ್ಟೆಲ್ಲಾ ಮಾಡಿ, ಹಠಮಾರಿ ಧೋರಣೆಯಿಂದ ಈ ರೀತಿ ಸದನದಲ್ಲಿ ನಡೆದುಕೊಳ್ಳುವುದು ಎಷ್ಟು ಸರಿ? ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈಗ ಅಧಿಕಾರ ಇದೆ. ಮುಂದೆ ಅಧೋಗತಿಗೆ ಹೋಗುವ ಪರಿಸ್ಥಿತಿ ಬರಬಹುದು. ಎಚ್ಚರಿಕೆಯಿಂದ ಇರಿ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


