ಗುಬ್ಬಿ: ಆಟೋ, ಲಾರಿ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಘಟನೆ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪರ್ಮಾನ್ ಖಾನ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಗುಬ್ಬಿ ತಾಲ್ಲೂಕಿನ ಕಿಟ್ಟದಕುಪ್ಪೆ ಗ್ರಾಮದ ನಿವಾಸಿಯಾಗಿದ್ದಾನೆ.
ಹೊರಗಿನಿಂದ ಗಾಂಜಾ ಖರೀದಿಸಿ ಗುಬ್ಬಿ ತಾಲ್ಲೂಕಿನಲ್ಲಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆದರಿಸಿ ದಾಳಿ ನಡೆಸಿದ್ದ ಪೊಲೀಸರು ಪರ್ಮಾನ್ ಖಾನ್ ಮನೆಯಲ್ಲಿದ್ದ 230 ಗ್ರಾಂ. ಗಾಂಜಾ ಸೊಪ್ಪು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA