ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 483 ಏತ ನೀರಾವರಿ ಯೋಜನೆಗಳಿವೆ. ಇವುಗಳ ನಿರ್ವಹಣೆಗಾಗಿ ಪ್ರತಿ ತಿಂಗಳು 12 ಕೋಟಿ ವಿದ್ಯುತ್ ಬಿಲ್ಲನ್ನ ಭರಿಸಲಾಗುತ್ತಿದೆ. ವಿದ್ಯುತ್ ಬಳಕೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಕೆರೆಗಳ ಮೇಲೆ ಫ್ಲೋಟಿಂಗ್ ಸೋಲಾರ್ ಪ್ಯಾನಲ್ ಅಳವಡಿಸುವ ಸಾಧ್ಯತೆಗಳ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್ ಬೋಸರಾಜ್ ಅವರು ಹೇಳಿದರು.
ಇಂದು ವಿಕಾಸಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಚಿಂತನೆಗಳು ಪ್ರಾರಂಭವಾಗಿವೆ. ಸಣ್ಣ ನೀರಾವರಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂರ್ತಜಲ ಹೆಚ್ಚಿಸುವುದು ಮತ್ತು ಕೆರೆಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ ಮಾಡುವುದು ಸಾಧ್ಯವಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿ 483 ಏತ ನೀರಾವರಿ ಯೋಜನೆಗಳಿದ್ದು, ಇವುಗಳ ನಿರ್ವಹಣೆಯಲ್ಲಿ ಆಗುತ್ತಿರುವ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲೂ ಚಿಂತನೆ ನಡೆಸಲಾಗುತ್ತಿದೆ. ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಕೆಯಿಂದ ಆಗಬಹುದಾದ ಅನುಕೂಲತೆಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


