ವಿರೋಧ ಪಕ್ಷಗಳ ಮೈತ್ರಿ ಸರ್ಕಾರಕ್ಕೆ ಸವಾಲಾಗುತ್ತದೆಯೇ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
‘ಈಗ ಆ ಬಗ್ಗೆ ಚರ್ಚೆ ಬೇಡ, ರಾಜ್ಯ ಮಟ್ಟದಲ್ಲಿ ಅವರ ನಿಲುವು ಸ್ವಲ್ಪ ಸ್ವಲ್ಪ ಗೊತ್ತಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಅವರ ನಿರ್ಧಾರ ಅಂತಿಮವಾಗಿಲ್ಲ. ಈ ವಿಚಾರವಾಗಿ ಸಿಎಂ ಇಬ್ರಾಹಿಂ ಈವರೆಗೂ ಮಾತನಾಡಿಲ್ಲ. ದೇವೇಗೌಡರು ಮಾತನಾಡಿಲ್ಲ. ಕೇವಲ ಶಾಸಕಾಂಗ ಪಕ್ಷದ ನಾಯಕರು ಮಾತ್ರ ನಿಲುವು ವ್ಯಕ್ತಪಡಿಸಿದ್ದು, ರಾಜ್ಯಾಧ್ಯಕ್ಷರಾಗಲಿ, ರಾಷ್ಟ್ರೀಯ ಅಧ್ಯಕ್ಷರಾಗಲಿ ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದು ತಿಳಿಸಿದರು. ಸ್ಪೀಕರ್ ಬದಲಾವಣೆಗೆ ಸಹಿ ಹಾಕಿರುವ ಬಗ್ಗೆ ಕೇಳಿದಾಗ, ‘ಅವರಿಗೆ ಯಶಸ್ಸಾಗಲಿ’ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


