ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ. ಇದಕ್ಕಾಗಿ 35410 ಕೋಟಿ ರೂ. ಅಗತ್ಯವಿದ್ದು, ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು.
ಅವರು ಇಂದು ವಿಧಾನಪರಿಷತ್ತಿನಲ್ಲಿ ಆಯವ್ಯಯ ಕುರಿತ ಚರ್ಚೆಗೆ ಉತ್ತರಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ 13500 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ, 8068 ಕೋಟಿ ರೂ. ಹೆಚ್ಚುವರಿ ಸಾಲ, ಬಂಡವಾಳ ಯೋಜನೆಗಳ ಮರು ಆದ್ಯತೆ ನಿಗದಿ ಮೂಲಕ 6086 ಕೋಟಿ ರೂ. ಹಾಗೂ ರಾಜಸ್ವ ಯೋಜನೆಗಳ ಮರು ಆದ್ಯತೆ ನಿಗದಿ ಪಡಿಸುವ ಮೂಲಕ 7೦೦೦ ಕೋಟಿ ರೂ. ಸೇರಿದಂತೆ ಒಟ್ಟು 34,654 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ತಿಳಿಸಿದರು.
ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಜೇಬಿಗೆ ಹಣ ಹಾಕುವ ಈ ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಜಾರಿಯಲ್ಲಿರುವ ಸಾರ್ವತ್ರಿಕ ಮೂಲ ಆದಾಯ (Universal Basic Income) ಕಾರ್ಯಕ್ರಮಗಳಿಂದ ಪ್ರೇರಿತವಾಗಿವೆ. ಶೇ. 9೦ ರಷ್ಟು ಜನರು ತೆರಿಗೆ ಪಾವತಿ ಮಾಡಿದರೆ, ಶೇ. 1೦ ರಷ್ಟು ಜನರು ತೆರಿಗೆಯ ಸೌಲಭ್ಯಗಳನ್ನು ಅನುಭವಿಸುತ್ತಾರೆ. ಆದರೆ ಸಂಪನ್ಮೂಲಗಳ ಮರುಹಂಚಿಕೆ ನ್ಯಾಯಯುತವಾಗಿ ಆಗಬೇಕೆಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA


