ಮಂಗಳೂರು ನಗರ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೃಷ್ಣಾಪುರದಲ್ಲಿ ವಾಸವಾಗಿದ್ದ ಮೊಹಮ್ಮದ್ ನಿಯಾಝ್(28), ನಿಶಾದ್(31) ಮತ್ತು ಮೊಹಮ್ಮದ್ ರಝೀನ್(24) ಎಂದು ಗುರುತಿಸಲಾಗಿದೆ.
ಬಂಧಿತರಿಂದ ಒಟ್ಟು 180 ಗ್ರಾಂ ತೂಕದ 9 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮಾರುತಿ ಸ್ವಿಫ್ಟ್ ಕಾರು, 1,40,000 ರೂಪಾಯಿ ಮೌಲ್ಯದ 4 ಮೊಬೈಲ್ ಫೋನ್‌ಗಳು, 22,050 ನಗದು ಹಣ, 1 ಪಿಸ್ತೂಲ್, 1 ಸಜೀವ ಗುಂಡು, 2 ಡ್ರ್ಯಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವೆಲ್ಲದರ ಒಟ್ಟು ಬೆಲೆ 27,62,000 ರೂಪಾಯಿ ಎಂದು ಅಂದಾಜಿಸಲಾಗಿದೆ.
ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಝ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಎಎಸ್‌ಐ ಅವರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸೆನ್ ಕ್ರೈ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧ ಪಟ್ಟ 2 ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ದರೋಡೆ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


