ತುಮಕೂರು: ಕರಡಿ ಒಂದು ರಾತ್ರಿಯಾಗುತ್ತಿದ್ದಂತೆ ಗ್ರಾಮದ ಹೊರವಲಯದಿಂದ ಗ್ರಾಮದೊಳಗೆ ನುಗ್ಗಿ ಭಯಭೀತಿ ಉಂಟು ಮಾಡುತ್ತಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮದಲ್ಲಿ ನಿತ್ಯ ನಿರಂತರವಾಗಿದೆ.
ಇದರಿಂದಾಗಿ ಮುಂಜಾನೆ ಹಾಗೂ ರಾತ್ರಿ ವೇಳೆಯಲ್ಲಿ ರೈತರು ತಮ್ಮ ಹೋಲ ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿ ದಿನ ಸಂಜೆ 7 ಗಂಟೆಗೆ ಜನವಸತಿ ಪ್ರದೇಶಗಳತ್ತ ಬರುವಂತಹ ಕರಡಿ ಜನರನ್ನು ಕಂಡರೆ ಅವರ ಮೇಲೆ ಎರಗುವ ಭೀತಿ ಸೃಷ್ಟಿ ಮಾಡಿದೆ. ಅಲ್ಲದೆ ಮನೆ ಪಕ್ಕದಲ್ಲಿರೋ ಬಾಳೆ, ಪರಂಗಿ, ಸೀಬೆ, ಕಡಲೆಕಾಯಿ ಕಿತ್ತು ಹಾಕುತ್ತಿರುವ ಕರಡಿಯಿಂದ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಒಂದು ಹಂತದಲ್ಲಿ ಸಂಜೆಯಾಗುತ್ತಿದ್ದಂತೆ ತೋವಿನಕೆರೆ ಗ್ರಾಮಸ್ಥರು ತಮ್ಮ ಮಕ್ಕಳನ್ನು ಕೂಡ ಹೊರಗೆ ಬೆಳೆದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಒಂದು ತಿಂಗಳಿನಿಂದ ಕರಡಿಯ ಕಾಟದಿಂದ ಬೇಸತ್ತು ಹೋಗಿರುವ ಗ್ರಾಮಸ್ಥರು ಇದನ್ನು ಸೆರೆ ಹಿಡಿದು ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದುವರೆಗೂ ಅರಣ್ಯ ಇಲಾಖೆಯ ಕ್ಯಾರೆಯನ್ನದೆ ಗ್ರಾಮಸ್ಥರ ನೆರವಿಗೆ ಬಾರದೆ ಇರುವುದು ವಿಪರ್ಯಾಸವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


