ತುರುವೇಕೆರೆ: ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗದ ಅಂಬೇಡ್ಕರ್ ರಸ್ತೆಯಲ್ಲಿರುವ ಪೂಜಾ ಫ್ಯಾನ್ಸಿ ಸ್ಟೋರ್ ನ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟಿಯಲ್ಲಿದ್ದ ಸಾವಿರಾರು ರೂಪಾಯಿ ಹಣವನ್ನು ಕಳ್ಳರು ದೋಚಿದ ಘಟನೆ ನಡೆದಿದೆ
ಅಂಗಡಿಗೆ ಬಂದಿದ್ದ ತಾಲೂಕಿನ ತಾಳ್ಕೆರೆ ಗ್ರಾಮದ ನಿವಾಸಿ ಶಾಲಿನಿ ಕುಮಾರಸ್ವಾಮಿ ಎಂಬ ಮಹಿಳೆ, ಸ್ಕೂಟಿಯನ್ನು ಅಂಗಡಿಯ ಹೊರಗೆ ನಿಲ್ಲಿಸಿ ಒಳಗೆ ಹೋಗಿದ್ದರು. ಈ ವೇಳೆ ವಾಹನದ ಡಿಕ್ಕಿಯಲ್ಲಿದ್ದ ಸುಮಾರು 93,000 ರೂಪಾಯಿಗಳನ್ನು ಕ್ಷಣ ಮಾತ್ರದಲ್ಲೇ ಕಳ್ಳರು ಎಗರಿಸಿದ್ದಾರೆ.
ಈ ಕೃತ್ಯ ನಡೆದ ಸ್ಥಳದಲ್ಲಿ ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಕಳೆದ ವಾರವಷ್ಟೇ ಬಾಣಸಂದ್ರ ರಸ್ತೆಯಲ್ಲಿರುವ ಶಾರದಾ ಎಲೆಕ್ಟ್ರಿಕಲ್ಸ್ ನ ಅಂಗಡಿಯಲ್ಲಿ ಕಳ್ಳತನವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂತಹದ್ದೇಹ ಘಟನೆ ನಡೆದಿದೆ. ಈ ಘಟನೆಗಳು ಜನರ ನೆಮ್ಮದಿ ಕೆಡಿಸಿದೆ.
ಘಟನೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಈವರೆಗೆ ಕಳ್ಳರನ್ನು ಹಿಡಿಯಲು ಸಾಧ್ಯವಾಗಿಲ್ಲ ಎನ್ನುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA