ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ, ಪದ್ಮವಿಭೂಷಣ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಸದಸ್ಯರು ಹಾಗೂ ಅವರ ನೇತೃತ್ವದ ಸಂಸ್ಥೆಗಳ ವಿರುದ್ಧ ಆಧಾರ ರಹಿತ ಆರೋಪ ಮಾಡುವುದು ಹಾಗೂ ಪ್ರಕಟಿಸದಂತೆ ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಧರ್ಮಸ್ಥಳ ದೇವಾಲಯ, ದೇವಾಲಯದ ಅಧೀನದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡದಂತೆ ನಿರ್ಬಂಧ ಹೇರಬೇಕು ಎಂದು ಕೋರಿ ಶೀನಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನಗರದ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ. ಅಲ್ಲದೆ, ಈ ಸಂಬಂಧ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಟಿವಿ ಚಾನಲ್ ಮತ್ತು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕಾಜ್ಞೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


