ಆರೋಗ್ಯ ಕವಚ 108 ಯೋಜನೆಯಡಿ ಆಂಬುಲೆನ್ಸ್ ಸೇವೆ ಸುಧಾರಿಸಲು ಮುಂದಾಗಿರುವ ಆರೋಗ್ಯ ಇಲಾಖೆ, ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನ ಮಾಡಲು ತಾಂತ್ರಿಕ ಸಮಿತಿ ರಚಿಸಿದೆ.
‘104’ ಆರೋಗ್ಯ ಸಹಾಯವಾಣಿ ಸೇವೆ ಸುಧಾರಿಸಲು ಸಹ ಈ ಸಮಿತಿ ನೆರವಾಗಲಿದೆ. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ಕಾರ್ಯ ನಿರ್ವಹಿಸಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ, ಕಾರ್ಮಿಕ ಇಲಾಖೆಯ ಆಯುಕ್ತ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರನ್ನು ಸಮಿತಿ ಒಳಗೊಂಡಿರಲಿದೆ ಎಂದು ಇಲಾಖೆ ತಿಳಿಸಿದೆ.
ಟೆಂಡರ್ ಪ್ರಕ್ರಿಯೆ, ಉತ್ತಮ ಆರೋಗ್ಯ ಸೇವೆಗೆ ಅಳವಡಿಸಿಕೊಳ್ಳಬೇಕಾದ ಸೌಲಭ್ಯ, ತಂತ್ರಜ್ಞಾನದ ಬಗ್ಗೆ ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಇಲಾಖೆ ಹೇಳಿದೆ.
ಯೋಜನೆ ನಿರ್ವಹಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆ ವಿರುದ್ಧ ಆರೋಪಗಳಿದ್ದವು. ವೇತನ ಪಾವತಿಯಾಗುತ್ತಿಲ್ಲ ಎಂದು ಸಂಸ್ಥೆಯ ನೌಕರರು ದೂರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


