ಮಣಿಪುರದಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಘಟನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್ಎಸ್) ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.
‘ಮಣಿಪುರದ ಕುಕಿ ಸಮುದಾಯದ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡುವವರೆಗೂ ಮಣಿಪುರದ ಪೊಲೀಸರು ತನಿಖೆ ಕೈಗೊಂಡಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.
‘ಬೇಟಿ ಬಚಾವೊ, ಬೇಟಿ ಪಡಾವೊ’ ಎಂಬುದು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಕೆಲವು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಶಾಂತಿ ಸ್ಥಾಪಿಸಲು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ. ಮಾನವೀಯತೆಯ ಮೇಲಿನ ದಾಳಿಯನ್ನು ಪ್ರಜ್ಞಾವಂತ ಸಮಾಜ ಒಗ್ಗಟ್ಟಾಗಿ ಧ್ವನಿ ಎತ್ತಬೇಕು. ಮಣಿಪುರದಲ್ಲಿ ಮಹಿಳೆಯರ ಮೇಲೆ ಅಮಾನವೀಯ ದೌರ್ಜನ್ಯ ಎಸಗಿದ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷ ನೀಡಬೇಕು’ ಎಂದು ಆಗ್ರಹಿಸಿದರು. ಸಂಘಟನೆಯ ರಾಜ್ಯ ಸಮಿತಿಯ ಸದಸ್ಯೆಯರಾದ ಭಾಗ್ಯ, ಹೇಮಾವತಿ, ಶಾಂತ ಎ, ನಿರ್ಮಲ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA