ಐಷಾರಾಮಿ ಜೀವನ ಶೈಲಿಗಾಗಿ ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಕಳ್ಳನನ್ನು ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ರಫೀಕ್ (29) ಬಂಧಿತ ಆರೋಪಿ, ಒಂದು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ ನೆಲಮಂಗಲ ಹಾಗೂ ರಾಜಾಜಿನಗರದಲ್ಲಿ ಮತ್ತೆ ಕೈಚಳಕ ತೋರಿಸಿ ಪೊಲೀಸರ ಅತಿಥಿಯಾಗಿದ್ದಾನೆ.
ಐಷಾರಾಮಿ ಜೀವನಕ್ಕಾಗಿ ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ ಆರೋಪಿ, ಬೆಂಗಳೂರು ಸೇರಿದಂತೆ ಹಲವು ಕಡೆ ಕಳ್ಳತನ ಮಾಡಿದ್ದ. ಬೀಗ ಹಾಕಿದ ಮನೆ, ಅಂಗಡಿಗಳನ್ನೇ ಗುರಿಯಾಗಿಸಿಕೊಂಡು ಬರೋಬ್ಬರಿ 20 ಕಡೆ ಕಳ್ಳತನ ಮಾಡಿ ಜೈಲು ಸೇರಿದ್ದ.
ಕಳೆದ ತಿಂಗಳಷ್ಟೇ ಜೈಲಿನಿಂದ ಹೊರಬಂದಿದ್ದವನು, ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ ನೆಲಮಂಗಲದ ಬಳಿ ಫಿಶ್ ಟೆಂಡರ್ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮನೆಯಲ್ಲಿಯೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಎರಡು ಪ್ರಕರಣಗಳಿಂದ 22 ಲಕ್ಷ ಮೌಲ್ಯದ 409 ಗ್ರಾಂ ಚಿನ 425 ಗಾಂಬೆಲಿ, 189 ಗ್ರಾಂ ತೂಕದ ನಕಲಿ ಚಿನ್ನ ವಶಕ್ಕೆ ಪಡೆದಿರುವ ಮಾಹಿತಿ ಪೊಲೀಸರಿಂದ ಸಿಕ್ಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


