ನವದೆಹಲಿ: ಮಣಿಪುರದ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ, ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು,ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಸುಮಾರು 160 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಮನ್ವಯತೆ ಸಾಧಿಸುವ ಪ್ರಯತ್ನಗಳು ನಡೆಯುತ್ತಿದ್ದರೂ ಹಿಂಸಾಚಾರ ಹತೋಟಿಗೆ ತರಲು ಮಣಿಪುರ ಸರ್ಕಾರಗಳು ವಿಫಲವಾಗಿದೆ.
ಇತ್ತೀಚೆಗೆ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಪ್ರತಿಭಟನೆ ನಡೆಸಿದ ಪರಿಣಾಮ ಘಟನೆ ಹಿಂಸಾಚಾರ ಇನ್ನಷ್ಟು ತಾರಕ್ಕೇರಿದೆ.
ಮಣಿಪುರದ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಸಂಸತ್‌ನಲ್ಲಿ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


