ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ.
ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡೂ ಜಿಲ್ಲೆಗಳಲ್ಲಿ ಜುಲೈ 25ರಂದು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಇಲ್ಲಿನ ಜಿಲ್ಲಾಧಿಕಾರಿಗಳ ಆದೇಶಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


