ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ನದಿಗೆ ಒಳಹರಿವು ಹೆಚ್ಚಳವಾಗಿದೆ.
ಕೊಯ್ನಾ ಜಲಾಶಯ ಪ್ರದೇಶ 150 ಮಿಮೀ, ಮಹಾಬಳೇಶ್ವರ 185 ಮಿಮೀ, ನವಜಾ 201ಮಿಮೀ ಮಳೆಯಾಗುತ್ತಿರುವ ಹಿನ್ನೆಲೆ ಕೊಯ್ನಾ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಕೃಷ್ಣಾ ನದಿಗೆ 1 ಲಕ್ಷ 14 ಸಾವಿರ ಕ್ಯೂಸೆಕ್ ಕ್ಕಿಂತ ಹೆಚ್ಚು ನೀರು ಬಿಡಲಾಗುತ್ತಿದೆ.
ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 9 ಕೆಳಹಂತದ ಸೇತುವೆಗಳ ಜಲಾವೃತವಾಗಿದ್ದು, ಕುಡಚಿ – ಉಗಾರ ಸೇತುವೆ ಮುಳುಗಡೆ ಹಂತ ತಲುಪಿದೆ. ಕುಡಚಿ – ಉಗಾರ ಸೇತುವೆ ಮುಳುಗಡೆಗೆ ಕೇವಲ 5 ಅಡಿ ಮಾತ್ರ ಬಾಕಿ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


