ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನ ವಿವಿ ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಜಾನ್ ಇಗ್ವಾಯತ್ (30) ಬಂಧಿತ ಆರೋಪಿ.
ಆರೋಪಿ ಹಾಗೂ ಮತ್ತೋರ್ವ ನೈಜೀರಿಯಾ ಪ್ರಜೆ ವಿದ್ಯಾರ್ಥಿ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದರು. ಆದರೆ ಗೋವಾದಿಂದ ಮಾದಕ ವಸ್ತುಗಳನ್ನು ತಂದು ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್ ವೇರ್ ಉದ್ಯೋಗಿಗಳಿಗೆ ಹಾಗೂ ಪಾರ್ಟಿಗಳಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದರು.
ಆರೋಪಿಗಳ ಕುರಿತು ಮಾಹಿತಿ ಪಡೆದು ದಾಳಿ ನಡೆಸಿದ ವಿವಿ ಪುರಂ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಗಳು ಶೌಚಾಲಯದಲ್ಲಿ ಅಡಗಿಸಿಟ್ಟಿದ್ದ ಮಾದಕ ಪದಾರ್ಥ ಸೇರಿದಂತೆ ಸುಮಾರು 2 ಕೋಟಿ ಮೌಲ್ಯದ 1 ಕೆ. ಜಿ 20 ಗ್ರಾಂ ಎಂಡಿಎಂಎ, ದ್ವಿಚಕ್ರ ವಾಹನ, ಮೊಬೈಲ್ ಫೋನ್ ಗಳನ್ನ ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


