ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ, ಆಟೊ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧ
ಹೇರಿದೆ. ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಜುಲೈ 12ರಂದು ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಹೊಸ ಆದೇಶವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.
ಸಂಚಾರಕ್ಕೆ ಎಕ್ಸ್‌ಪ್ರೆಸ್ ವೇ ಮುಕ್ತವಾದಾಗಲೇ ಬೈಕ್, ಆಟೊ ಹಾಗೂ ಕೃಷಿಗೆ ಬಳಸುವ ವಾಹನಗಳ ಸಂಚಾರವನ್ನು ನಿಷೇಧಿಸಬೇಕು ಎಂಬು ಮಾತು ಕೇಳಿ ಬಂದಿತ್ತು. ಈ ಕುರಿತು, ಪ್ರಾಧಿಕಾರ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರ ಭೂ ಸಾರಿಗೆ ಸಚಿವಾಲಯಕ್ಕೆ ಕಳಿಸಿ ಕೊಟ್ಟಿತ್ತು. ಆಗ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ನಂತರ ವಿಷಯ ತಣ್ಣಗಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


