ಬೆಂಗಳೂರಿಗೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಇಂದು ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಜತೆ ಒಪ್ಪಂದ ಮಾಡಿಕೊಂಡಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಬ್ಯಾಂಡ್ ಬೆಂಗಳೂರು ಹಾಗೂ ಕರ್ನಾಟಕದ ಪಾಲಿಗೆ ಇಂದು ಹೊಸ ಅಧ್ಯಾಯ ಆರಂಭವಾಗುತ್ತಿದೆ. ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಇದು ಹೆಜ್ಜೆಗುರುತಾಗಲಿದೆ.ಕೆಲ ವರ್ಷಗಳ ಹಿಂದೆ ವಿಶ್ವ ವಿನ್ಯಾಸ ರಾಜಧಾನಿ ಯಾವುದು ಎಂಬ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಇದರಲ್ಲಿ ಬೆಂಗಳೂರು ಯಶ ಕಾಣಲಿಲ್ಲ. ಬೆಂಗಳೂರು ವಾಸಯೋಗ್ಯ ನಗರವಾಗಿ ನಿರ್ಮಾಣ ಮಾಡಬೇಕಿದೆ. ಇದಕ್ಕಾಗಿ ಈ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ನಗರವನ್ನು ಬೆಂಗಳೂರನ್ನು ಜಾಗತಿಕ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಯೋಜನೆಯಾದರೂ ಅದರ ವಿನ್ಯಾಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ನಾವು ಇಂದು ಈ ಸಂಸ್ಥೆ ಜೊತೆ ಕೈಜೋಡಿಸುತ್ತಿದ್ದೇವೆ. ಈ ಸಂಸ್ಥೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳ ವಿಚಾರದಲ್ಲಿ ಸಲಹೆ, ಮಾರ್ಗದರ್ಶನ ನೀಡಲಿದೆ.
ಆರಂಭದಲ್ಲಿ ಈ ಒಪ್ಪಂದ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈಗ ಇದನ್ನು ಬಿಎಂಆರ್ ಡಿಎ ವ್ಯಾಪ್ತಿಯ ಪ್ರದೇಶಗಳನ್ನು ಒಳಗೊಳ್ಳಲಾಗಿದೆ. ಬೆಂಗಳೂರಿಗೆ ತನ್ನದೇ ಆದ ಇತಿಹಾಸ, ಪರಂಪರೆ, ಸಂಸ್ಕೃತಿ ಹೊಂದಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದದಿಂದ ನಮಗೆ ಶಕ್ತಿ ಹೆಚ್ಚಲಿದೆ. ಸರ್ಕಾರ ಹಾಗೂ ಬಿಬಿಎಂಪಿ ಪರವಾಗಿ ಆಯುಕ್ತರು ಈ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ.
ನಮ್ಮ ಹಿರಿಯರು ತಮ್ಮದೇ ಆದ ರೀತಿಯಲ್ಲಿ ಬೆಂಗಳೂರನ್ನು ಕಟ್ಟಿದ್ದಾರೆ. ಬಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ನಾವು ಅದಕ್ಕೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಈಗಿರುವ ಬೆಂಗಳೂರಿನಲ್ಲಿ ಯಾವ ರೀತಿಯ ಬದಲಾವಣೆ ಮಾಡಬಹುದು, ಮುಂದೆ ಬೆಳೆಯಲಿರುವ ಬೆಂಗಳೂರನ್ನು ಹೇಗೆ ರೂಪಿಸಬೇಕು, ಹೊಸ ಸ್ಯಾಟಲೈಟ್ ಟೌನ್ ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ಸಲಹೆ ನೀಡಲು ಈ ಒಪ್ಪಂದ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


