ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ. ಬಿಜೆಪಿಯ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತೋದ್ದಾರಕ ಎನ್ನುವ ಕಾಂಗ್ರೆಸ್ಸಿಗರು ಬಿಜೆಪಿ ಜಾರಿಗೊಳಿಸಿದ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ. ನೂತನ ಶಿಕ್ಷಣ ನೀತಿ ರದ್ದು ಮಾಡಿದ್ದಾರೆ. ಪಠ್ಯ ಪರಿಷ್ಕರಿಸಿದ್ದಾರೆ. ರೈತರು ಮತ್ತಿತರರಿಗೆ ಜಾರಿ ಮಾಡಿದ್ದ ವಿದ್ಯಾನಿಧಿ ನಿಲ್ಲಿಸಿದ್ದಾರೆ. ಪ್ರತಿಯೊಂದು ಜಿಲ್ಲೆಗೆ ಗೋಶಾಲೆ ಕಟ್ಟುವ ಯೋಜನೆಯನ್ನು ಕೈಬಿಟ್ಟಿದ್ದಾರೆ. ರೈತಪರ ಎಪಿಎಂಸಿ ಕಾಯ್ದೆ ಬದಲಿಸಿದ್ದಾರೆ ಎಂದು ಟೀಕಿಸಿದರು. ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಕೊಟ್ಟಿದ್ದು, ಅದನ್ನು ಕೈಬಿಟ್ಟಿದ್ದಾರೆ. ‘ನಮ್ಮ ಕ್ಲಿನಿಕ್’ ಕೈಬಿಟ್ಟಿದ್ದಾರೆ. ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ. ಕೊಡುವ ಶ್ರಮಶಕ್ತಿಯನ್ನು ಕೈಬಿಟ್ಟಿದ್ದಾರೆ.
ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ. ಕೊಡುವ ಶ್ರಮಶಕ್ತಿಯನ್ನು ಕೈಬಿಟ್ಟಿದ್ದಾರೆ. ಅಗ್ನಿವೀರರಾಗಲು ಎಸ್ಸಿ, ಎಸ್‌ಟಿ ಯುವಕರಿಗೆ ತರಬೇತಿಯನ್ನು ರದ್ದು ಮಾಡಿದ್ದಾರೆ. ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ, ಹಾಲು ಉತ್ಪಾದಕರ ಬ್ಯಾಂಕ್ ರದ್ದು, ವಿನಯ ಸಾಮರಸ್ಯ ಕ್ಕೀಂ ಕೈಬಿಟ್ಟಿದ್ದಾರೆ ಎಂದು ಆಕ್ಷೇಪಿಸಿದರು.
ಸಿದ್ದರಾಮಯ್ಯ 1995-2000, 2013ರಿಂದ 18ರ ವರೆಗೆ ಬಜೆಟ್ ಮಂಡಿಸಿದ್ದರು. ಅವನ್ನು ಅವಲೋಕನ ಮಾಡಿದಾಗ ಅವರು ಮಂಡಿಸಿದ ಬಜೆಟ್ ಗಳ ಸ್ಥಿತಿಗತಿ ಅರ್ಥವಾಗುತ್ತದೆ. 2000 ವರೆಗಿನ 5 ವರ್ಷಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮಿಗತೆಯಿಂದ ಆರ್ಥಿಕ ದುಃಸ್ಥಿತಿ ಕಡೆ ನಡೆಯಿತು. ನಂತರ ಎಸ್. ಎಂ. ಕೃಷ್ಣ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ಹಣಕಾಸಿನ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿದ್ದರು. ಆಗ ರಾಜ್ಯದ ಆರ್ಥಿಕ ಸ್ಥಿತಿ ಶಿಥಿಲವಾದುದನ್ನು ತಿಳಿಸಿದ್ದರು. 2018ರಲ್ಲಿ ಅಧಿಕಾರದಿಂದ ಕೆಳಕ್ಕೆ ಇಳಿಯುವಾಗ ಸಾಲಕ್ಕೆ ರಾಜ್ಯವನ್ನು ಸಿಲುಕಿಸಿದ್ದನ್ನು ಅಂಕಿಅಂಶಗಳೇ ಹೇಳುತ್ತವೆ. ಅವರು 2. 42 ಲಕ್ಷ ಕೋಟಿ ಸಾಲ ಮಾಡಿದ್ದರು ಎಂದು ನಾರಾಯಣಸ್ವಾಮಿ ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


