ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಅಷ್ಟೇ ಕಳೆದಿದೆ. ಆದ್ರೆ, ಇದು ಸಾಮಾನ್ಯ ಸರ್ಕಾರ ಅಲ್ಲ. 60% ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಈಗಾಗಲೇ 60% ಸರ್ಕಾರ ಅಂತಾ ಕರೆಯಲಾಗುತ್ತಿದೆ. ಕಾಂಗ್ರೆಸ್ ಶಾಸಕರೇ ಈಗ ಬಂಡಾಯ ಎದ್ದಿದ್ದಾರೆ. ರಾಜ್ಯದಲ್ಲಿ ಯಾವುದೇ ಸರಿ ಇಲ್ಲ ತೋರಿಸುತ್ತಿದೆ. ಕಾಂಗ್ರೆಸ್ ಆತಂರಿಕ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡುವುದು ಬಿಟ್ಟು, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಆ ಗ್ಯಾರೆಂಟಿ ಕೂಡಾ ಸರಿಯಾಗಿ ಜಾರಿಯಾಗುತ್ತಿಲ್ಲ. ಇನ್ನು ಕಾಂಗ್ರೆಸ್ ಶಾಸಕರ ಪತ್ರಕ್ಕೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


